Home ಟಾಪ್ ಸುದ್ದಿಗಳು ಯಡಿಯೂರಪ್ಪರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕು: ಎಂ.ಬಿ.ಪಾಟೀಲ್

ಯಡಿಯೂರಪ್ಪರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕು: ಎಂ.ಬಿ.ಪಾಟೀಲ್

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿ, ಇದು ತಮ್ಮ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಒತ್ತಡ ಹೇರುತ್ತಿದೆ ಎಂಬ ಮಾತು ಕೇಳಿಬರುತ್ತಿರುವ ಸಂದರ್ಭದಲ್ಲೇ ಕಾಂಗ್ರೆಸ್ ನಾಯಕ, ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್ ಈ ಹೇಳಿಕೆ ನೀಡಿದ್ದಾರೆ.

Join Whatsapp
Exit mobile version