ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನ ಹಂಚಿದ ಬಗ್ಗೆ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು: ಕಾಂಗ್ರೆಸ್

Prasthutha|

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಮ್ಮ ಕುಟುಂಬಕ್ಕೆ 48 ನಿವೇಶನ ಹಂಚಿಕೆ ಮಾಡಿರುವುದಾಗಿ 2011ರಲ್ಲಿ ಅಂದಿನ ಸಿಎಂ ಯಡಿಯೂರಪ್ಪ ಅವರು ಪರಿಷತ್ ಸಭಾಪತಿಗಳಿಗೆ ದಾಖಲೆ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಹೆಚ್.ಡಿ. ಕುಮಾರ ಸ್ವಾಮಿ ಅವರಿಗೆ 300/200 (60,000 ಅಡಿ) ಹಂಚಿಕೆ ಮಾಡಿರುವುದಾಗಿ ಯಡಿಯೂರಪ್ಪ ಹೇಳಿದ್ದರು. ಇದು ಪರಿಷತ್ ನಡಾವಳಿಯಲ್ಲೂ ದಾಖಲಾಗಿದೆ. ಈ ಬಗ್ಗೆ ಬಿಜೆಪಿಯವರ ನಿಲುವೇನು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಪ್ರಶ್ನಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆ ಹೊರಡಿಸಿದ ರಮೇಶ್ ಬಾಬು, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವ ವಿರುದ್ಧ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಆರೋಪಮಾಡುತ್ತಿದ್ದಾರೆ. ಆದರೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗ ಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುತ್ತಿಲ್ಲ ಎಂದಿದ್ದಾರೆ.



Join Whatsapp