ಬೆಂಗಳೂರು: ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಆಯ್ಕೆ ಮಾಡಲು ಸಿದ್ಧತೆ ನಡೆಸಿದೆ. ಇದರ ಜೊತೆಗೆ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು(ಜುಲೈ 05) ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂದು ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಅಮಿತ್ ಶಾ, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಎಂದು ನಾವೆಲ್ಲಾ ಭಾವಿಸಿದ್ದೇವೆ. ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.