ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯೊಳಗೆ ಭುಗಿಲೆದ್ದ ಆಕ್ರೋಶ | ವಿಶ್ವನಾಥ್ ಗರಂ; ಶಾಸಕರಿಗೆ ಅಸಮಾಧಾನ

Prasthutha|

ಬೆಂಗಳೂರು : ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಯಲ್ಲಿ ನೂತನ ಸಚಿವರಾಗುವ ಶಾಸಕರು, ಮುಖಂಡರ ಹೆಸರು ಪ್ರಕಟವಾಗುತ್ತಿದ್ದಂತೆಯೇ, ಬಿಜೆಪಿಯೊಳಗೆ ಅಸಮಾಧಾನದ ಕಟ್ಟೆಯೊಡಿದೆ. ಮಾಜಿ ಸಚಿವ, ಎಚ್. ವಿಶ್ವನಾಥ್, ಶಾಸಕ ರೇಣುಕಾಚಾರ್ಯ, ಶಾಸಕ ಸತೀಶ್ ರೆಡ್ಡಿ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ವಿಶ್ವನಾಥ್ ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಯೋಗೇಶ್ವರ್ ಒಬ್ಬ ಫ್ರಾಡ್, ಅವನಿಗೆ ಏಕೆ ಸ್ಥಾನ ನೀಡಿದ್ದೀರಾ? ಅವನೇನಾದರೂ ರಾಜೀನಾಮೆ ನೀಡಿ ಬಂದಿದ್ದಾನಾ? ಅತವಾ ಯಡಿಯೂರಪ್ಪ ಅವರಿಗೆ ಬ್ಲ್ಯಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಂಡಿದ್ದಾನಾ? ಯಡಿಯೂರಪ್ಪನವರೇ ನೀವು ಕೊಟ್ಟ ಮಾತಿಗೆ ತಪ್ಪಿದ್ದೀರಾ, ಸಿದ್ದಲಿಂಗೇಶ್ವರ ನಿಮಗೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಬಿ ಮಾಡಿದವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಶಾಸಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ಇನ್ನೊಂದೆಡೆ, ಶಾಸಕ ಸತೀಶ್ ರೆಡ್ಡಿ ಸಾಮಾಜಿಕ ಜಾಲತಾಣವೊಂದರಲ್ಲಿ ಪೋಸ್ಟ್ ಒಂದನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಠಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೇ? ನಮ್ಮ ಕಷ್ಟ-ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ಬಹಿರಂಗ ಪಡಿಸಿದ್ದಾರೆ.

Join Whatsapp