ಬೆಂಗಳೂರು: 2021ನೇ ಸಾಲಿನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವಿವಿಧ ಪ್ರಶಸ್ತಿಗಳನ್ನು ಶನಿವಾರ ಪ್ರಕಟಿಸಿದ್ದು, “ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ “ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ”ಗೆ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರೆಸ್ ಕ್ಲಬ್ ಪ್ರಕಟನೆ ತಿಳಿಸಿದೆ.
ಕೋವಿಡ್ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ| ಕೆ.ಸುಧಾಕರ್, ಜತೆಗೆ 16 ಹಿರಿಯ ಪತ್ರಕರ್ತರನ್ನು ಆರಿಸಲಾಗಿದೆ.