ಆಂಧ್ರ ಪ್ರದೇಶ ರಾಜ್ಯಪಾಲರಾಗಿ ಯಡಿಯೂರಪ್ಪ?

Prasthutha|

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಕುರಿತ ಗೊಂದಲವನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶಮನ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುವವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿಯೂ ಅರುಣ್ ಸಿಂಗ್ ತಿಳಿಸಿದ್ದಾರೆ. ಇದರ ಮಧ್ಯೆಯೂ ಈಗ ಸುದ್ದಿಯೊಂದು ಹರಿದಾಡುತ್ತಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿ ಹೊಸ ಸಿಎಂ ಆಯ್ಕೆಯಾಗಲಿದ್ದು, ಬಿಜೆಪಿ ಯಡಿಯೂರಪ್ಪ ಅವರನ್ನು ಆಂದ್ರ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಿದೆ ಎನ್ನಲಾಗುತ್ತಿದೆ.

- Advertisement -

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದ್ದು, ಆಂಧ್ರ ಪ್ರದೇಶದ ಹಾಲಿ ರಾಜ್ಯಪಾಲರ ಅವಧಿ ಜುಲೈ ನಲ್ಲಿ ಅಂತ್ಯಗೊಳ್ಳುತ್ತಿದ್ದು,ತೆರವಾಗುವ ಸ್ಥಾನಕ್ಕೆ ಯಡಿಯೂರಪ್ಪ ಅವರನ್ನು ನೇಮಿಸಲು ವರಿಷ್ಟರು ಚಿಂತನೆ ನಡೆಸಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ನಾಯಕತ್ವದ ಗೊಂದಲವನ್ನು ಈ ರೀತಿ ಇತ್ಯರ್ಥಗೊಳಿಸುವುದು ವರಿಷ್ಟರು ಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಬಿಜೆಪಿಯ ಉಸ್ತುವಾರಿ ಹೊಣೆ ಹೊತ್ತ ಅರುಣ್ ಸಿಂಗ್ ಮೂರು ದಿನಗಳ ತಮ್ಮ‌ ಕರ್ನಾಟಕ ಭೇಟಿಯನ್ನು ಮುಗಿಸಿ ದಿಲ್ಲಿಗೆ ಮರಳುತ್ತಿದ್ದಂತೆಯೇ ಈ ಸುದ್ದಿ ದಿಲ್ಲಿಯಲ್ಲಿ ಸ್ಪೋಟಗೊಂಡಿದೆ. ಈ ಬಗ್ಗೆ ಕಾದು ನೋಡಬೇಕಿದೆ.

Join Whatsapp