ಯಡಿಯೂರಪ್ಪಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ

Prasthutha|

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ಗುರುವಾರ) ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

- Advertisement -


ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಗಂಭೀರತೆ ಪರಿಗಣಿಸಿದ್ದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಇತ್ತೀಚೆಗೆ ಸಿಐಡಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಇದರಿಂದ ಬಂಧನ ಭೀತಿಯಲ್ಲಿರುವ ಬಿಎಸ್ವೈ, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

Join Whatsapp