ಬೆಂಗಳೂರು : ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಯಡಿಯೂರಪ್ಪರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲವನ್ನುಂಟು ಮಾಡಿದೆ.
ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ಎಲ್ಲಿವರೆಗೆ ವಿಶ್ವಾಸವಿರುತ್ತೋ ಅಲ್ಲಿ ವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ. ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ ಕೆಲಸ ಮಾಡುತ್ತೇನೆ. ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ಯಡಿಯೂರಪ್ಪ ನೀಡಿದ್ದಾರೆ.
ಯಾವ ದಿನ ಯಡಿಯೂರಪ್ಪನವರೇ ಬೇಡ ಎಂದು ಹೇಳುತ್ತಾರೋ, ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ. ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ. ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ. ನಾನು ಯಾರ ಬಗ್ಗೆಯೂ ಟೀಕೆೊ ಮಾಡುವುದಿಲ್ಲ. ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.