ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ.
ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ನಿವಾಸದಲ್ಲಿ ಇದ್ದರು. ಬಳಿಕ ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಕಾವೇರಿಯಲ್ಲೇ ವಾಸ್ತವ್ಯ ಹೂಡಿದ್ದರು. ಇದೀಗ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸವನ್ನು ತೊರೆದಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ಖಾಸಗಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೀಗ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಫ್ಟ್ ಆಗಲಿದ್ದಾರೆ.
ಇನ್ನು ಸಿದ್ದರಾಮಯ್ಯನವರ ಕುಮಾರಕೃಪಾ ಸರ್ಕಾರಿ ನಿವಾಸವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಂಚಿಕೆ ಮಾಡಲಾಗಿದೆ.