ಹಾವೇರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಹಾಗೂ ಮಾಜಿ ಯು.ಬಿ. ಬಣಕಾರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಬಣಕಾರ್ ತಾಲೂಕಿನಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ತೊರೆದಿದ್ದಾರೆ. ಎದುರಾಳಿಯಾಗಿದ್ದ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬಣಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಬಣಕಾರ್ ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ಆದರೆ, ಇದೀಗ ಬಣಕರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ.