ಯಡಿಯೂರಪ್ಪರಿಗೆ ಸ್ಥಾನ: ಹಿಂದಡಿಯಿಟ್ಟ ರಾಜ್ಯಾಧ್ಯಕ್ಷ ಆಕಾಂಕ್ಷಿಗಳು

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಯಲ್ಲಿ ಸ್ಥಾನ ಸಿಗುತ್ತಿದೆಯಂತೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ನಾಯಕರು ಹಿಂದಡಿ ಇಡಲಾರಂಭಿಸಿದ್ದಾರೆ ಎನ್ನಲಾಗುತ್ತಿದೆ.

- Advertisement -

ನಳಿನ್‌ ಕುಮಾರ್‌ ಕಟೀಲ್‌ ಅವಧಿ ಈ ತಿಂಗಳು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಹಲವರು ಆ ಸ್ಥಾನದ ಆಕಾಂಕ್ಷಿಯಾಗಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಇಂಧನ ಸಚಿವ ವಿ.ಸುನಿಲ್‌ ಕುಮಾರ್‌, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕರು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಆದರೆ ಯಡಿಯೂರಪ್ಪರವರ ಹಠಾತ್‌ ರಂಗ ಪ್ರವೇಶ ಚಿತ್ರಣವನ್ನೇ ಬದಲಾಯಿಸಿದೆ. ಚುನಾವಣಾ ವರ್ಷದಲ್ಲಿ ಟಿಕೆಟ್‌ ಹಂಚಿಕೆ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ರಾಜಕೀಯವಾಗಿ ಅನ್ಯ ಪಕ್ಷಗಳನ್ನು ಹಿಮ್ಮೆಟ್ಟಿಸುವುದಕ್ಕೆ ತಂತ್ರಗಾರಿಕೆಯನ್ನೂ ರೂಪಿಸಬೇಕಾಗುತ್ತದೆ. ಆದರೆ ಯಡಿಯೂರಪ್ಪ ಆಯಕಟ್ಟಿನ ಸ್ಥಾನದಲ್ಲಿ ಇರುವಾಗ ತನ್ನತನ ತೋರಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಎರಡನೇ ಹಂತದ ನಾಯಕರು ರಾಜ್ಯಾಧ್ಯಕ್ಷ ಸ್ಥಾನ ಸದ್ಯ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

- Advertisement -

ಬಿ.ಎಲ್.ಸಂತೋಷ್‌ ಹಾಗೂ ಯಡಿಯೂರಪ್ಪ ಇಬ್ಬರ ಮಧ್ಯೆ ಹಾಲಿ ಅಧ್ಯಕ್ಷ ಕಟೀಲ್‌ ಸದ್ಯಕ್ಕೆ ಅಧಿಕಾರ ಉಳಿಸಿಕೊಂಡಂತೆ ಕಾಣುತ್ತಿದೆ.

Join Whatsapp