ಯಲ್ಲಾಪುರ: ತರಕಾರಿ ಸಾಗಾಟದ ಲಾರಿ ಪಲ್ಟಿ; 10 ಮಂದಿ ಮೃತ್ಯು

Prasthutha|

ಕಾರವಾರ: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

- Advertisement -

ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24) ಮೃತಪಟ್ಟವರು ಎಂದು ತಿಳಿದು ಬಂದಿದೆ.

15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​ ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು.

- Advertisement -

ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ಮಾಹಿತಿ ದೊರೆತಿದೆ. ನಸುಕಿನ‌ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್​ಪಿ ನಾರಾಯಣ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.




Join Whatsapp