Home ಟಾಪ್ ಸುದ್ದಿಗಳು ಕರಾವಳಿ ಸೇರಿ ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಸೇರಿ ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಜೂ. 20ರಿಂದ 24ರ ವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ ಪ್ರದೇಶದಲ್ಲಿ ದುರ್ಬಲವಾಗಿದೆ. ಬೆಳಗಾವಿ, ಬೆಂಗಳೂರು, ಬೀದರ್‌, ಹಾಸನ ಸಹಿತ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಸೋಮವಾರದಿಂದ 5 ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.

Join Whatsapp
Exit mobile version