ಕರಾವಳಿ ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Prasthutha|

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -


ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಗದಗ, ಧಾರವಾಡದಲ್ಲಿ ಸಪ್ಟೆಂಬರ್ 11 ಮತ್ತು 12ರಂದು ಹಾಗೂ ಹಾವೇರಿ, ಕಲಬುರಗಿ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಮುಂದಿನ 24 ಗಂಟೆ ಬಿರುಸಿನ ಮಳೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Join Whatsapp