ಮಂಗಳೂರು: ಆ.3ರಿಂದ ಆ.5ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೊ ಅಲರ್ಟ್ ನೀಡಲಾಗಿದೆ. ಉಳಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೆ ನೈಋುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆ, ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.