ಅಕಾಲಿಕ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ‘ಯೆಲ್ಲೊ ಅಲರ್ಟ್’ ಘೋಷಣೆ

Prasthutha|

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಬುಧವಾರದಿಂದ ಮಳೆಯಾಗುತ್ತಿದ್ದು, ಈ ಎರಡು ಜಿಲ್ಲೆಗಳಿಗೆ ಇದೇ 4 ಮತ್ತು 5ರಂದು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

- Advertisement -

ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಒಂದು ವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 4 ರಿಂದ 10 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Join Whatsapp