ನಮ್ಮಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ: ಸಚಿವ ಯೋಗೇಶ್ವರ್ ಆಕ್ರೋಶ

Prasthutha|

ಮೈಸೂರು: ನಮ್ಮ‌ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ. ನಮ್ಮ ಸರ್ಕಾರದಲ್ಲಿ ವಿಪಕ್ಷದವರ ಕೈ ಮೇಲಾಗುತ್ತಿದೆ. ಸರ್ಕಾರ ಮಾಡಬೇಕಾಗಿದ್ದ ಜಿಪಂ, ತಾಪಂ ಮೀಸಲಾತಿಯನ್ನು ಕುಮಾರಸ್ವಾಮಿ ಮಾಡಿದ್ದಾರೆ. ಅನುಕೂಲ‌ ಬಂದಂತೆ ಮೀಸಲಾತಿ ಹಂಚಿಕೆ‌ ಮಾಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವೇದನಾಶೀಲ, ಆಲೋಚನೆಯುಳ್ಳ ಸಿಎಂ ಹುದ್ದೆ ಎನ್ನುವುದು ಅಂಬಾರಿ ಹೊರುವ ಆನೆ ಇದ್ದಂತೆ. ಮುಖ್ಯಮಂತ್ರಿ ಹುದ್ದೆ ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸಬೇಕೇ ಹೊರತು ವೈಭವ, ಪ್ರತಿಷ್ಠೆಗೆ ಅಲ್ಲ. ಬದಲಾವಣೆ ಜಗದ ನಿಯಮ. ಅರ್ಜುನ, ಅಭಿಮನ್ಯು ಕೆಲ ವರ್ಷ ಅಂಬಾರಿ ಹೊತ್ತ. ಅಪ್ಪ ಹೊತ್ತನೆಂದು ಮರಿ ಆನೆಗೆ ಅಂಬಾರಿ ಹೊರಿಸಲಾಗುವುದಿಲ್ಲ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ಕಾಲೆಳೆದಿದ್ದಾರೆ.

 ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ‌ ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳುವುದು ಎಂದು ಈ ವೇಳೆ ಅವರು ಬೇಸರ ತೋಡಿಕೊಂಡಿದ್ದಾರೆ.

Join Whatsapp