ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್ ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಉದ್ಘಾಟಿಸಿದರು.
ದೇಶದ ದೊಡ್ಡ ರಾಜ್ಯದ ಮುಖ್ಯಮಂತ್ರಿಯಾದ ಯೋಗಿ ಆದಿತ್ಯನಾಥ್ ಅವರು ದಕ್ಷ ಪ್ರಮಾಣಿಕ ಹಾಗೂ ಯಶಸ್ವಿ ಸಿಎಂ. ಯೋಗಿ ಬಂದಿದ್ದು ಹೆಮ್ಮೆ ಮತ್ತು ಬಹಳಷ್ಟು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮುಂತಾದವರು ಭಾಗಿಯಾಗಿದ್ದರು.