ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ಯೋಗಿ ಆದಿತ್ಯನಾಥ್ ಆದೇಶ
Prasthutha: March 12, 2021

ಲಖನೌ : ರಾಜ್ಯದಲ್ಲಿ ರಸ್ತೆಗಳನ್ನು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
ರಸ್ತೆಗಳನ್ನು ಒತ್ತುವಾರಿ ಮಾಡಿ ನಿರ್ಮಿಸಲಾಗಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸಬೇಕೆಂಬ ಆದೇಶವನ್ನು ನೀಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.
ಎಲ್ಲಾ ಜಿಲ್ಲೆಗಳ ಮ್ಯಾಜಿಸ್ಟ್ರೇಟ್ ಗಳಿಗೂ ಉತ್ತರ ಪ್ರದೇಶದ ಗೃಹ ಇಲಾಖೆ ಈ ಆದೇಶದ ಸುತ್ತೋಲೆಯನ್ನು ರವಾನೆ ಮಾಡಿದೆ. ರಸ್ತೆಗಳನ್ನು ಅತಿಕ್ರಮಿಸಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
