ಲಕ್ನೊ: ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಅಟಲ್ ಬಿಹಾರ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.