ದಲಿತರು, ಹಿಂದುಳಿದ ವರ್ಗದವರ ಮೀಸಲಾತಿ ವಿರುದ್ಧ ಯೋಗಿ ಬುಲ್ಡೋಜರ್: ಜೈರಾಮ್ ರಮೇಶ್

Prasthutha|

ನವದೆಹಲಿ: ಸಿಎಂ ಯೋಗಿ ಬುಲ್ಡೋಜರ್ ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

- Advertisement -

ಬುಲ್ಡೋಜರ್ ಎಲ್ಲಿ ಓಡಿಸಬೇಕು ಎಂಬುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕಲಿಯಿರಿ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಯೋಗಿ ಆದಿತ್ಯನಾಥ್ ಅವರ ವೆಬ್ ಸೈಟ್ ನಲ್ಲಿನ ಲೇಖನವನ್ನು ಉಲ್ಲೇಖಿಸಿ ಇದು ಆರ್ ಎಸ್ ಎಸ್ ನ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.


ಬುಲ್ಡೋಜರ್ ಅನ್ನು ಎಲ್ಲಿ ಓಡಿಸಬೇಕು ಎಂಬುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕಲಿಯಿರಿ ಎಂದು ನಿರ್ಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಿದ್ದಾರೆ. ಯೋಗಿಯ ಬುಲ್ಡೋಜರ್, ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಗೆ ಹೇಗೆ ವಿರೋಧಿಯಾಗಿದೆ ಎಂಬುದನ್ನು ನೋಡಿ ಎಂದು ಹೇಳಿದ್ದಾರೆ.



Join Whatsapp