ಲಖ್ನೋ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂಪಡೆಯಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ ನಂತರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ( ಗೃಹ) ಅವನಿಶ್ ಅವಾಸ್ತಿ ರೈತರ ಮೇಲಿನ ಕೇಸ್ ಹಿಂಪಡೆಯುವ ಆದೇಶವನ್ನು ಹೊರಡಿಸಿದ್ದಾರೆ.
ಪೈರನ್ನು ಸುಡುವ ಮೂಲಕ ಪರಿಸರ ಮಾಲಿನ್ಯಕ್ಕೆ ಕಾರಣವಾದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ಹಾಕಲಾಗಿತ್ತು.
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿಯಲ್ಲಿ ರೈತರು ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಆದ್ದರಿಂದ ಪೈರನ್ನು ಸುಟ್ಟಿದ್ದಕ್ಕಾಗಿ ರೈತರ ವಿರುದ್ಧ ಹಾಕಲಾಗಿದ್ದ 868 ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅವಾಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.