ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ: ಸಿಎಂ ಇಬ್ರಾಹಿಂ ವಾಗ್ದಾಳಿ

Prasthutha|

‘ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ’

- Advertisement -


ಬೆಂಗಳೂರು: ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತದೆ ಅಂತ ಕಾದು ನೋಡಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ.


ಪದಾಧಿಕಾರಿಗಳ ವಿಸರ್ಜನೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ನನ್ನನ್ನು ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 3/2 ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೋಟಿಸ್ ಕೊಡಬೇಕು. ನಾನು ಚುನಾವಣಾ ಆಯೋಗದಲ್ಲಿ ನಿಮ್ಮ ನಿರ್ಧಾರ ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

- Advertisement -


ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ ಎಂಬ ಭಾವನೆ ನನ್ನಲ್ಲಿ ಇಲ್ಲ. ಇನ್ನೂ ಡೈವೋರ್ಸ್ ಆಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ. ಇವತ್ತಿನವರೆಗೂ ದೇವೇಗೌಡರನ್ನು ನಾನು ನನ್ನ ತಂದೆ ಸಮಾನ ಅಂದುಕೊಂಡಿದ್ದೆ. ನನ್ನ ಪರಿಷತ್ ಸ್ಥಾನ ಬಿಟ್ಟು ನಿಮ್ಮ ಬಳಿ ಬಂದೆ. ಮಹಾಭಾರತದಲ್ಲಿ ಆದ ಹಾಗೆ ರಾಜ್ಯದಲ್ಲಿ ಜನತಾದಳಕ್ಕೂ ಆಗುತ್ತದೆ ಎಂದರು.