ದೆಹಲಿ: ಲೋಕಸಭೆ ಕಲಾಪ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಸಂಸದ ರಾಹುಲ್ ಗಾಂಧಿ ಮಾತನಾಡಿದ್ದಾರೆ.ಸೋಮವಾರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಇದು ರಾಹುಲ್ ಗಾಂಧಿಯವರ ಮೊದಲ ಭಾಷಣವಾಗಿದೆ.
ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದ ರಾಹುಲ್ “ನೀವು (ಬಿಜೆಪಿ) ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ.
ಮಣಿಪುರ ವಿಷಯ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಪ್ರಧಾನಿಯವರು ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡಿಲ್ಲ. ಅವರು ಮಣಿಪುರವನ್ನು ಎರಡಾಗಿ ವಿಭಜಿಸಿದ್ದಾರೆ. ಅವರು ಮಣಿಪುರದಲ್ಲಿ ಭಾರತವನ್ನು ಕೊಂದಿದ್ದಾರೆ, ಮಣಿಪುರವನ್ನು ಮಾತ್ರವಲ್ಲ, ಅವರು ಭಾರತವನ್ನು ಕೊಂದಿದ್ದಾರೆ. ಅವರ ರಾಜಕೀಯವು ಮಣಿಪುರವನ್ನು ಕೊಂದಿಲ್ಲ, ಆದರೆ ಅದು ಮಣಿಪುರದಲ್ಲಿ ಭಾರತವನ್ನು ಕೊಂದಿದೆ, ಅವರು ಮಣಿಪುರದಲ್ಲಿ ಭಾರತವನ್ನು ಕೊಂದಿದ್ದಾರೆ.
ಕೆಲವು ದಿನಗಳ ಹಿಂದೆ ನಾನು ಮಣಿಪುರಕ್ಕೆ ಹೋಗಿದ್ದೆ, ಇಲ್ಲಿವರೆಗೆ ನಮ್ಮ ಪ್ರಧಾನಿ ಹೋಗಿಲ್ಲ, ಏಕೆಂದರೆ ಅವರಿಗೆ ಮಣಿಪುರ ಭಾರತವಲ್ಲ, ನಾನು ಮಣಿಪುರ ಎಂಬ ಪದವನ್ನು ಬಳಸಿದ್ದೇನೆ ಆದರೆ ಅದು ಮಣಿಪುರವಾಗಿ ಉಳಿದಿಲ್ಲ ಎಂಬುದು ಸತ್ಯ . ನೀವು ಮಣಿಪುರವನ್ನು ಎರಡಾಗಿ ಮಾಡಿದ್ದೀರಿ, ನೀವು ಮಣಿಪುರವನ್ನು ಒಡೆದು ಹಾಕಿದ್ದೀರಿ ಎಂದು ಹೇಳಿದ್ದಾರೆ.
‘ಭಾರತ ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು. ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿದ ಅವರು ಯಾತ್ರೆ ಇನ್ನೂ ಮುಗಿದಿಲ್ಲ. ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ ಜನರ ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು ಎಂದರು.
LIVE: Address to the Parliament | No Confidence Motion https://t.co/1FBUqftwJ9
— Rahul Gandhi (@RahulGandhi) August 9, 2023