‘ನೀವು ವಾಸಿಸುತ್ತಿರುವುದು ಸೆಗಣಿ ಗಣರಾಜ್ಯದಲ್ಲಿ’: ಶಿಕ್ಷಣ ನೀತಿಯ ಬಗ್ಗೆ ಸಂಸದೆ ಮಹುವಾ ಮೊಯಿತ್ರಾ ಆಕ್ರೋಶ

Prasthutha|

ಹೊಸದಿಲ್ಲಿ: ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಆರೆಸ್ಸೆಸ್ ನ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಕ್ಕಾಗಿ ಕೇಂದ್ರ ಶಿಕ್ಷಣ ಸಚಿವರ ವಿರುದ್ಧ ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಸಂಸದ ಮಹುವಾ ಮೊಯಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

‘ನೀವು ಸಗಣಿ ಗಣರಾಜ್ಯದಲ್ಲಿ ಬದುಕುತ್ತಿದ್ದೀರಿ ಎಂದು ನಿಮಗೆ ತಿಳಿದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಸತ್ತು ಅಥವಾ ರಾಜ್ಯಗಳೊಂದಿಗೆ ಚರ್ಚಿಸಿಲ್ಲ. ಆದರೆ ಕೇಂದ್ರ ಶಿಕ್ಷಣ ಸಚಿವರು ಆರೆಸ್ಸೆಸ್ ಗೆ ವಿವರಿಸಲು ಎನ್‌ಇಪಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಮಹುವಾ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅನುಷ್ಠಾನಕ್ಕೆ ಸಂಬಂಧಿಸಿದ ವಿವರಗಳನ್ನು ಚರ್ಚಿಸಲು ಆರೆಸ್ಸೆಸ್ ಎರಡು ದಿನಗಳ ಕಾರ್ಯಾಗಾರವನ್ನು ದೆಹಲಿಯಲ್ಲಿ ಆಯೋಜಿಸಿತ್ತು. ಸಭೆಯಲ್ಲಿ ಆರೆಸ್ಸೆಸ್ ನಾಯಕರೊಂದಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು.

Join Whatsapp