ಮಂಗಳೂರು: ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವ ಜೋಡಿಗಳು | ಪೋಕ್ಸೋ ಕಾಯ್ದೆಯಡಿ ಓರ್ವ ಅರೆಸ್ಟ್

Prasthutha: June 29, 2021

ಮಂಗಳೂರು : ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಜೋಡಿಗಳು ಸಿಕ್ಕಿ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ನಗರದ ಖಾಸಗಿ ಹೋಟೆಲ್ ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಎರಡು ಪ್ರತ್ಯೇಕ ಜೋಡಿಗಳನ್ನು ವಶಕ್ಕೆ ಪಡೆದಿದ್ದರು. ಪೊಲೀಸರು ದಾಳಿ ನಡೆಸುವಾಗ ಯುವಕರು-ಯುವತಿಯರು ಪ್ರತ್ಯೇಕ ರೂಂನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂದರು ಪೊಲೀಸರು ಜೋಡಿಗಳನ್ನು ವಶಕ್ಕೆ ಪಡಿದು ವಿಚಾರಣೆ ನಡೆಸಿದಾಗ ಇವರಲ್ಲಿ ಓರ್ವ ಅಪ್ರಾಪ್ತೆಯಾಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ ಕೋವಿಡ್ ಕರ್ಫ್ಯೂ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲೂ ಬಂದರ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.‌

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ