ಮಂಗಳೂರಿನಲ್ಲಿ ಯುವ ಜೆಡಿಎಸ್ ಕಾರ್ಯಕರ್ತರಿಂದ ನಳಿನ್ ಕುಮಾರ್ ಕಟೀಲ್’ಗೆ ಕಪ್ಪುಬಾವುಟ ಪ್ರದರ್ಶನ

Prasthutha|

ಮಂಗಳೂರು: ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ದ.ಕ. ಯುವ ಜೆಡಿಎಸ್ ಕಾರ್ಯಕರ್ತರು ನಗರದ ಸರ್ಕಿಟ್ ಹೌಸ್ ಬಳಿ ಸಂಸದ ನಳಿನ್ ಕುಮಾರ್ ಕಟೀಲ್’ಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ, ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೇಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ವರ್ತನೆ ಖಂಡನೀಯ. ದೇಶದ ಪ್ರಧಾನಿಯಾಗಿ ಅವರು ನೀಡಿರುವ ಕೊಡುಗೆಯನ್ನು ಸಂಸದ ನಳಿನ್ ಮರೆತಿರಬಹುದು. ಆದರೆ ದೇಶದ ಜನರು ಮರೆತಿಲ್ಲ. ರಾಜಕೀಯದಲ್ಲಿ ತನ್ನದೇ ಕೊಡುಗೆ ನೀಡಿರುವ ದೇವೆಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಲಘುವಾಗಿ ಮಾತನಾಡಿದ್ದು, ಖಂಡನೀಯ ಎಂದರು.

Join Whatsapp