ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆ

Prasthutha|

ಮಂಗಳೂರು: ಮಂಗಳೂರಿನ ಹೊರವಲಯದ ಬೋಳೂರು ನೇತ್ರಾವತಿ ನದಿ ತೀರದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಮೀನುಗಾರರು ತಮ್ಮ ಕೆಲಸಕ್ಕೆ ತೆರಳುತ್ತಿದ್ದಾಗ ಮೃತದೇಹ ಪತ್ತೆಯಾಗಿದ್ದು, ಸಮುದ್ರ ಸೇರುವುದನ್ನು ತಪ್ಪಿಸಿದ್ದಾರೆ.

- Advertisement -

ಮೃತದೇಹ ಪತ್ತೆಯಾದ ತಕ್ಷಣ ಮೀನುಗಾರರು ಮೇಲಕ್ಕೆತ್ತಿ ಸಮುದ್ರ ಪಾಲಾಗುವುದಕ್ಕೆ ತಡೆಯಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.



Join Whatsapp