ರಾಯಚೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ, ಯುವತಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಸಿಂಗನೋಡಿ ಗ್ರಾಮದ ಸರಸ್ವತಿ(21), ಮಂಡಲಗೇರಾ ಗ್ರಾಮದ ವಿನೋದ(24) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಮೃತ ಸರಸ್ವತಿ ಮತ್ತು ವಿನೋದ್ ಗೆ ಮನೆಯವರೆಲ್ಲ ಸೇರಿ ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಮೊಬೈಲ್ ನಲ್ಲಿ ಮಾತನಾಡುವ ವೇಳೆ ಮಾತಿಗೆ ಮಾತು ಬೆಳೆದು, ಜಗಳವಾಡಿ ಮನನೊಂದು ಮೊದಲು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಈ ಸುದ್ದಿ ತಿಳಿದ ಯುವಕ ಸಹ ಮನನೊಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ನಿಖರ ಕಾರಣ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ದೂರು ದಾಖಲಾಗಿದೆ.