Home ಟಾಪ್ ಸುದ್ದಿಗಳು ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ

ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ

ಬೆಳಗಾವಿ: ನಡು ರಸ್ತೆಯಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಬಸವನಗರದಲ್ಲಿ ತಡರಾತ್ರಿ ನಡೆದಿದೆ.


ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.


ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಹತ್ಯೆಗೈಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃತ್ಯದಲ್ಲಿ ಮೂರು ಜನ ಭಾಗಿಯಾಗಿರುವ ಶಂಕೆ ಇದೆ. ಹತ್ಯೆ ಬಳಿಕ ಕಿಡಿಗೇಡಿಗಳು ಪರಾರಿಯಾಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ.ಯುವಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version