ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

Prasthutha|

ಮಡಿಕೇರಿ: ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಈ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಡೆದಿದ್ದು, ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ ಯುವಕ. ಈತ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ. ಸೋಮವಾರ ಸಂಜೆ ತೋಟದ ಮರ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಕಾರ್ಮಿಕರು ಕೆಲಸ ಮಾಡಿ ತೆರಳುವ ವೇಳೆ ಯುವಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Join Whatsapp