ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು

Prasthutha|

ಮಂಗಳೂರು : ಉಪ್ಪಿನಂಗಡಿ ಬಳಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅನೀಸ್ (27 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

- Advertisement -

ಕಳೆದ ಶುಕ್ರವಾರ 2 ತಾರೀಕಿನಂದು ಬೆಳಿಗ್ಗೆ 9.15 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಬಳಿಯ ಪಂಜಳ ಎಂಬಲ್ಲಿ  ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ನಲ್ಲಿದ್ದ ಅನೀಸ್ ಮತ್ತು ಅವರ ಮಾವ ಹಮೀದ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರ ಗಾಯಗೊಂಡು ಕೋಮಾಗೆ ಜಾರಿದ್ದ ಅನೀಸ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಅನೀಸ್ ಅಸುನೀಗಿದ್ದಾರೆ.

Join Whatsapp