ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವಕ

Prasthutha|

ತುಮಕೂರು: ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.

- Advertisement -

ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್ ಆಶಾ ಕಾರ್ಯಾಕರ್ತೆಯಾಗಿರುವ ವರಲಕ್ಷ್ಮಮ್ಮ ಎಂಬವರ ಪುತ್ರನಾಗಿದ್ದು, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ.

ಘಟನೆಯ ಮೊದಲು ಯುವಕ ತಾಯಿಯ ಬಳಿ ನನಗೆ ಚಾರ್ಜರ್ ಕೊಡು ಎಂದಿದ್ದಾನೆ. ಈ ವೇಳೆ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ.

- Advertisement -

ವಾಪಸ್ ಮನೆಗೆ ಬಂದು ಬಾಗಿಲು ಬಡಿದಾಗ ನಿಖಿಲ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp