Home ಟಾಪ್ ಸುದ್ದಿಗಳು ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಯುವಕರ ಹುಚ್ಚಾಟ

ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಯುವಕರ ಹುಚ್ಚಾಟ

ಶಿರಸಿ: ಗುಜರಾತ್’ನ ತೂಗು ಸೇತುವೆ ದುರಂತ ಹಸಿಯಾಗಿರುವಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ತೂಗು ಸೇತುವೆ ಮೇಲೆ ಕೆಲ ಪ್ರವಾಸಿಗರು ಕಾರು ಚಲಾಯಿಸಿ ಉದ್ಧಟತನ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.


ಜಿಲ್ಲೆಯ ಯಲ್ಲಾಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರ್ ಚಲಾಯಿಸಿಕೊಂಡು ಬಂದಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.


ಸೇತುವೆಯಲ್ಲಿ ಸಾಗಿ ಬಂದ ಕಾರನ್ನು ಸ್ಥಳೀಯರು ತಡೆದು, ಬಂದ ದಾರಿಗೆ ಹಿಂದಕ್ಕೆ ಕಳುಹಿಸಿದ್ದಾರೆ. ಗುಜರಾತ್ ನ ಮೊರ್ಬಿಯಲ್ಲಿ ತೂಗುಸೇತುವೆ ಕುಸಿದು ನೂರಾರು ಜನ ಮೃತಪಟ್ಟ ಸಂಗತಿಯಿಂದಲೂ ಕೆಲವರು ಎಚ್ಚೆತ್ತುಕೊಂಡಿಲ್ಲ. ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರು, ಸ್ಥಳೀಯರು ಪ್ರಶ್ನಿಸಿದ್ದಾರೆ.

Join Whatsapp
Exit mobile version