ವಿಟ್ಲ: ಡೆತ್ ನೋಟ್ ಬರೆದು ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

Prasthutha|

ವಿಟ್ಲ: ವಿಟ್ಲ ಕಟ್ಟೆ ಎಂಬಲ್ಲಿ ಯುವತಿಯೋರ್ವರು ಡೆತ್ ನೊಟ್ ಬರೆದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

- Advertisement -

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22) ಎಂದು ಗುರುತಿಸಲಾಗಿದೆ.

ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ನಿಶ್ಮಿತಾ, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು ಎಂದು ವರದಿಯಾಗಿದೆ.

- Advertisement -

ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

 ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

Join Whatsapp