ಕೆರೆಗೆ ಬಿದ್ದು ಯುವತಿ ಮೃತ್ಯು: ಮೃತದೇಹ ಹೊರತೆಗೆದ ಮುಸ್ಲಿಮ್ ಯುವಕರು

Prasthutha|

ಮಡಿಕೇರಿ: ಕಾಲು ಜಾರಿ ಯುವತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಣಂಜಗೇರಿಯಲ್ಲಿ ನಡೆದಿದೆ.

- Advertisement -

ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ಯುವತಿ.

ಮೂರ್ನಾಡು ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಮೃತದೇಹ ಹೊರತೆಗೆದ ಮುಸ್ಲಿಮ್ ಯುವಕರು

ಯುವತಿ ಕಾಲು ಜಾರಿ ಕಾಲುವೆಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರಾದ ನಾಪೋಕ್ಲುವಿನ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ.
ಅಬ್ದುಲ್ ರಜಾಕ್, ಅಬ್ದುಲ್ ಮಜೀದ್, ಶಮೀರ್ ಸೇರಿದಂತೆ ನಾಪೋಕ್ಲು ಯುವಕರ ತಂಡದ ಕೆಲಸಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Join Whatsapp