ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಮೃತ್ಯು

Prasthutha|

ಚೆನ್ನೈ: ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಯುವತಿಯೊಬ್ಬಳು ಲಾರಿ ಅಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

- Advertisement -


ಶೋಭನಾ (22) ಮೃತ ಯುವತಿ ಎಂದು ಗುರುತಿಸಲಾಗಿದೆ.


ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಶೋಭನಾ, ತನ್ನ ಸಹೋದರನನ್ನು ನೀಟ್ ತರಬೇತಿ ತರಗತಿಗೆ ಕರೆದುಕೊಂಡು ಹೋಗುವಾಗ ಘಟನೆ ನಡೆದಿದೆ. ಅಪಘಾತದಲ್ಲಿ ಸಹೋದರನಿಗೂ ಕೂಡ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp