ಪುತ್ತೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ

Prasthutha|

ಪುತ್ತೂರು: ಮನೆಯಲ್ಲಿ ಅಡುಗೆ ಕೆಲಸದಲ್ಲಿ ನಿರತಳಾಗಿದ್ದ  ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಪುತ್ತೂರಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಮಂಗಳವಾರ ಹಾಡಹಗಲೇ ನಡೆದಿದೆ.

- Advertisement -

ಮುಂಡೂರು ಗ್ರಾಮದ ಕಂಪ ನಿವಾಸಿ ಗುರುವಪ್ಪ ಮತ್ತು ದೇವಕಿ ದಂಪತಿಯ ಮಗಳು ಜಯಶ್ರೀ(23) ಹತ್ಯೆಗೀಡಾದವರು. ಮಂಗಳವಾರ ಮಧ್ಯಾಹ್ನ ಜಯಶ್ರೀ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಯೋರ್ವ ಮನೆಗೆ ಏಕಾಏಕಿ ನುಗ್ಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸಮೀಪದ ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದ ದೇವಕಿ ಅವರು ಶಬ್ದ ಕೇಳಿ ಓಡಿ ಬಂದಾಗ ಮಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡಿದೆ. ತಕ್ಷಣ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp