Home ಟಾಪ್ ಸುದ್ದಿಗಳು ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು !

ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು !

ಶಿವಮೊಗ್ಗ:  ಪ್ರೀತಿಸಿದ ಯುವಕ ಕೈಕೊಟ್ಟ ವಿಷಯ ತಿಳಿದ ಯುವತಿ ಆತನ ಮದುವೆ ದಿನದಂದೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ರೂಪ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ.

ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜಾತಿಯಲ್ಲಿ ಇಬ್ಬರು ಬೇರೆಯಾದರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು. ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಇದರೊಂದಿಗೆ ಪಿಎಚ್.ಡಿ ಯನ್ನು ಮಾಡುತ್ತಿದ್ದರು. ರೂಪಾ ಪ್ರೀತಿಸುವ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದು,  ನಂತರ ರೂಪಾ ಪೋಷಕರೇ ಜಾತಿ ಬೇರೆಯಾಗಿದ್ದರೂ ಪರವಾಗಿಲ್ಲ. ಮಗಳು ಚೆನ್ನಾಗಿದ್ದರೆ ಸಾಕು ಎಂದು ಮುರಳಿ ಜೊತೆ ವಿವಾಹ ಮಾಡಲು ನಿರ್ಧರಿಸಿದ್ದರು. ಆದರೆ ಮುರಳಿ ರೂಪಾಳಿಗೆ ಕೈಕೊಟ್ಟು ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿ ಎಂಬ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ. ಇದರಿಂದ ಮನನೊಂದ ರೂಪ ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Join Whatsapp
Exit mobile version