Home ಟಾಪ್ ಸುದ್ದಿಗಳು ಲಿವಿಂಗ್ ಪಾರ್ಟ್ನರ್ ನನ್ನು ಹತ್ಯೆ ಮಾಡಿದ ಯುವತಿ

ಲಿವಿಂಗ್ ಪಾರ್ಟ್ನರ್ ನನ್ನು ಹತ್ಯೆ ಮಾಡಿದ ಯುವತಿ

ಬೆಂಗಳೂರು: ಯುವತಿಯೊಬ್ಬಳು ಲಿವಿಂಗ್ ಟು ಗೆದರ್ ನಲ್ಲಿದ್ದ ಯುವಕನನ್ನು ಹತ್ಯೆಗೈದ ಪ್ರಕರಣ ಹುಳಿಮಾವಿನಲ್ಲಿ ನಡೆದಿದೆ.


ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ರೇಣುಕಾ (34) ಎಂದು ಗುರುತಿಸಲಾಗಿದೆ. ಯುವತಿ ಕೇರಳ ಮೂಲದ ಜಾವಿದ್ (24) ಎಂಬಾತನ ಜೊತೆ ಆಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದಳು. ಇಬ್ಬರೂ ಪರಸ್ಪರ ಸಂಶಯದಿಂದ ಆಗಾಗ ಜಗಳವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಸಹ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕಾಗಿ ಆತನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.


ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version