Home ಟಾಪ್ ಸುದ್ದಿಗಳು ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ

ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ


ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.


ಕ್ಯಾಬ್ ನಲ್ಲಿ ಬಂದ ಪಾನಮತ್ತ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕ್ಯಾಬ್ ಚಾಲಕ ಅತ್ಯಾಚಾರ ನಡೆಸಿದ ಹೀನ ಕೃತ್ಯವು ಬೆಂಗಳೂರಿನ ಮಲ್ಲೇಶ್ ಪಾಳ್ಯ ಎಂಬಲ್ಲಿ ನಡೆದಿದೆ.ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೋಗಲು ಯುವತಿಯು ಕ್ಯಾಬ್ ಹತ್ತಿದ ವೇಳೆ ಈ ಹೀನ ಕೃತ್ಯವೆಸಗಲಾಗಿದೆ. ಪಾರ್ಟಿ ಮುಗಿದ ಮೇಲೆ ಯುವತಿ ಮಲ್ಲೇಶ್ ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಬುಕ್ ಮಾಡಿದ ಕೆಲವೇ ನಿಮಿಷಗಳಲ್ಲಿ ಕಾರಿನಲ್ಲಿ ಬಂದ ಚಾಲಕ, ಆಕೆಯನ್ನು ಹತ್ತಿಸಿಕೊಂಡು ಹೋಗಿದ್ದಾನೆ.


ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾನಮತ್ತ ಯುವತಿ ಮೇಲೆ ಚಾಲಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಯುವತಿಯು ನೀಡಿದ ದೂರು ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version