ಮಹಾರಾಷ್ಟ್ರ: ಯುವತಿಯೊಬ್ಬಳು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಉಂಗಾರ್ ರಸ್ತೆಯ ಬೋರ್ನ್ ಘಾಟ್‌ನಲ್ಲಿ ನಡೆದಿದೆ.
ವರದಿಗಳ ಪ್ರಕಾರ ಯುವತಿ ತನ್ನ ಸ್ನೇಹಿತರೊಂದಿಗೆ ಶನಿವಾರ ಬೋರ್ನ್ ಘಾಟ್‌ಗೆ ತೆರಳಿದ್ದಾರೆ. ಈ ವೇಳೆ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೇ ಮುಂದೆ ಹೋಗಿದ್ದು, ಕಾಲು ಜಾರಿ 100 ಅಡಿ ಆಳಕ್ಕೆ ಬಿದ್ದಿದ್ದಾಳೆ. ಸ್ಥಳೀಯರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ರಕ್ಷಣಾ ಕಾರ್ಯಾಚರಣೆಯನ್ನು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಸ್ಥಳೀಯರು ಹಗ್ಗದ ಸಹಾಯದಿಂದ ಮಹಿಳೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತುತ್ತಿರುವುದನ್ನು ಕಾಣಬಹುದು. ಯುವತಿ ನೋವಿನಿಂದ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಕ್ಷಣ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ಹಲವು ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.