ಚಿಕ್ಕಬಳ್ಳಾಪುರ: ರೀಲ್ಸ್ ಮಾಡಲು ಹೋಗಿ ಯುವತಿಯೋರ್ವಳು ಕೆರೆಗೆ ಉರುಳಿ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.
ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ ಎಂದು ತಿಳಿದು ಬಂದಿದೆ.
ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ, ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು. ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಈ ವೇಳೆ ಅಮೃತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.