ಯೂಟ್ಯೂಬ್‌ ನಲ್ಲಿ ಯುವತಿ ಫೋಟೋ ದುರ್ಬಳಕೆ: ಸಾಫ್ಟ್ ವೇರ್‌ ಗಂಡ ಹೆಂಡ್ತಿಯ ಬಂಧನ

Prasthutha|

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವತಿಯೊಬ್ಬಳ ಫೋಟೋವನ್ನು ಯೂಟ್ಯೂಬ್‌ ಚಾನೆಲ್‌ ಮೂಲಕ ದುರ್ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಗಳಿಬ್ಬರನ್ನು ಬಂಧಿಸಿದ ಘಟನೆಯು ಶಿವಮೊಗ್ಗದಲ್ಲಿ ನಡೆದಿದೆ.
ಬಂಧಿತ ಆರೋಪಿಗಳು ಶಿವಮೊಗ್ಗ ಮೂಲದ ಹರೀಶ್‌ ಮತ್ತು ಅನುಷಾ ಎಂದು ತಿಳಿದು ಬಂದಿದೆ. ಆರೋಪಿ ದಂಪತಿ ಸಾಫ್ಟ್ ವೇರ್‌ ಎಂಜಿನಿಯರ್‌ಗಳಾಗಿದ್ದು, ಕನ್ನಡ ಲೈಟ್‌ ಎಂಬ ಯೂಟ್ಯೂಬ್‌ ಚಾನೆಲ್‌ ಮೂಲಕ ವೀಕ್ಷಕರ ಗಮನ ಸೆಳೆಯುವ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದರು. ವೀಡಿಯೋಗಳಿಗಾಗಿ ಹಲವು ಫೋಟೋ ಬಳಕೆ ಮಾಡುತ್ತಿದ್ದ ಇವರು ಜೋತಿಷ್ಯಕ್ಕೆ ಸಂಬಂಧಿಸಿ ಬಂಟ್ವಾಳದ ಯುವತಿಯ ಫೋಟೋ ದುರ್ಬಳಕೆ ಮಾಡಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸ್‌ಠಾಣೆಯಲ್ಲಿ ದೂರು ದಾಖಲಾಗಿತ್ತು.

- Advertisement -

ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp