Home ಟಾಪ್ ಸುದ್ದಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕ ಅಂಕುಶ್ ಪೊಲೀಸ್ ವಶಕ್ಕೆ

ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕ ಅಂಕುಶ್ ಪೊಲೀಸ್ ವಶಕ್ಕೆ

ಬೆಂಗಳೂರು: ನಗರದಲ್ಲಿ ನೆಲೆಸಿರುವ ಮೂಲತಃ ಪಶ್ಚಿಮ ಬಂಗಾಳದ ನಿವಾಸಿ ಅಂಕುಶ್ ಎಂಬಾತ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಬೆಳಕಿಗೆ ಬಂದಿದೆ.


ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಅಂಕುಶ್ ಪಾಕ್ ಪರ ಘೋಷಣೆ ಕೂಗಿ ಉದ್ಧಟತನ ತೋರಿದ್ದಾನೆ. ಬೆಂಗಳೂರಿನ ಪಿಜಿ ನಲ್ಲಿ ವಾಸವಾಗಿದ್ದ ಅಂಕುಶ್’ನನ್ನು ತೀವ್ರ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆತ ತಮಾಷೆಗಾಗಿ ಘೋಷಣೆ ಕೂಗಿರುವುದಾಗಿ ತಿಳಿದುಬಂದಿದೆ.


ಹಿಂದೆ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರ ಮೂಲದ ರಿಯಾ ರವಿಚಂದ್ರನ್ ಮತ್ತು ಪಂಜಾಬ್’ನ ದಿನಕರ್ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕ್ ಪರ ಘೋಷಣೆ ಕೂಗಿದ್ದರು. ನಂತರ ಈ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಮಾರತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್’ಆರ್ ದಾಖಲಿಸಿದ್ದರು.


ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದ್ದರು ಮತ್ತು ತಮಾಷೆಗಾಗಿ ಪಾಕ್ ಪರ ಘೋಷಣೆ ಕೂಗಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದರು. ಕಾಲೇಜಿನಲ್ಲಿ ಐಪಿಎಲ್ ಕ್ರಿಕೆಟ್ ಟೀಂ ಪರ ಜೈಕಾರ ಕೂಗುತ್ತಿದ್ದ ವೇಳೆ ಪೈಪೋಟಿಗೆ ಬಿದ್ದು ಪಾಕ್ ಪರ ಘೋಷಣೆ ಕೂಗಿದ್ದು, ಉದ್ದೇಶ ಪೂರ್ವಕವಾಗಿ ಕೂಗಿಲ್ಲ ಎಂಬ ವಿಚಾರ ತನಿಖೆ ವೇಳೆ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲಾಗಿತ್ತು.

Join Whatsapp
Exit mobile version