ಮಡಿಕೇರಿ | ಗಾಂಜಾ ಮಾರಾಟಕ್ಕೆ ಯತ್ನ : ಯುವಕ ಬಂಧನ

Prasthutha|

ಮಡಿಕೇರಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಐ.ಬಿ.ಸಮೀಪದ ನಿವಾಸಿ ಶಮಂತ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಾರುಕಟ್ಟೆಯಲ್ಲಿ ಗಾಂಜಾ ತುಂಬಿದ್ದ 10 ಪ್ಯಾಕೆಟ್‍ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ಕಾರ್ಯಾಚರಣೆ ನಡೆಸಿ, ಮಾಲು ಸಹಿತಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಿಂದ ಗಾಂಜಾ ತಂದು ಪಟ್ಟಣ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯ ಬಗ್ಗೆ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಸಹಿತಿ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Join Whatsapp
Exit mobile version