ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ದೀಪಕ್ ರಾವ್ ಹತ್ಯೆ ಆರೋಪಿ ಅರೆಸ್ಟ್!

Prasthutha|

ಮಂಗಳೂರು: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ದೀಪಕ್ ರಾವ್ ಹತ್ಯಾ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ದಸ್ತಗಿರಿ ನಡೆಸಿದ್ದಾರೆ. ಕಿನ್ನಿಗೋಳಿಯ ಉಲ್ಲಂಜೆ ನಿವಾಸಿ ಮೊಹಮ್ಮದ್ ನೌಶಾದ್ (25) ಬಂಧಿತ ಆರೋಪಿ.

- Advertisement -


ಈತನ ವಿರುದ್ಧ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ ನಡೆಸಿ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿ ನೌಶಾದ್, ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರುಷಗಳ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದನು.

Join Whatsapp