Home ಟಾಪ್ ಸುದ್ದಿಗಳು ಎರಡು ಬಾರಿ ಬಂಧನಕ್ಕೊಳಗಾದ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್

ಎರಡು ಬಾರಿ ಬಂಧನಕ್ಕೊಳಗಾದ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್


ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ರೈಲು ನಿಲ್ದಾಣದ ಹೊರಗಡೆ ಸೋಮವಾರ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ನಲಪಾಡ್ ಅವರನ್ನು ಪೊಲೀಸರು ಸೋಮವಾರ ಎರಡು ಬಾರಿ ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಮುಹಮ್ಮದ್ ನಲಪಾಡ್ ನೇತೃತ್ವದಲ್ಲಿನ 15 ಮಂದಿ ಪ್ರತಿಭಟನಕಾರರು ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದರು. ಅಗ್ನಿಪಥ ಯೋಜನೆ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದ ಪ್ರತಿಭಟನಕಾರರು ಘೋಷಣೆ ಕೂಗಿದ್ದರು.
ಆದಾಗ್ಯೂ, ಭಾರತ್ ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಿದ್ದರಿಂದ ಪ್ರತಿಭಟನಕಾರರು ರೈಲು ನಿಲ್ದಾಣ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ತದನಂತರ ದೊಡ್ಡ ಗುಂಪಿನೊಂದಿಗೆ ಸಂಜೆ 7 ಗಂಟೆ ಸುಮಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿಗೆ ಆಗಮಿಸಿದ ನಲಪಾಡ್ ಮತ್ತೊಮ್ಮೆ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ‘ಮೋದಿ ಗೋ ಬ್ಯಾಕ್’ ಎಂಬ ಘೋಷಣೆ ಕೂಗಿದ್ದರು. ಎರಡು ಬಾರಿಯೂ ಪೊಲೀಸರು ನಲಪಾಡ್ ರನ್ನು ಬಂಧಿಸಿ ಬಿಡುಗಡೆಗೊಳಿಸಿದ್ದಾರೆ.

Join Whatsapp
Exit mobile version