Home ಕರಾವಳಿ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ

ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ

ಮಂಗಳೂರು : ಆಸ್ಪತ್ರೆಯೊಂದರಲ್ಲಿ ನಡೆಯುತ್ತಿದ್ದ ಹಗಲು ದರೋಡೆಯನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಕೊರೋನಾ ಸೊಂಕಿಗೆ ಬಲಿಯಾಗಿದ್ದ ವ್ಯಕ್ತಿ ಕುಟುಂಬಕ್ಕೆ ಮೃತದೇಹ ನೀಡದೆ ಹತ್ತು ಲಕ್ಷ ಬಿಲ್ ನೀಡುವಂತೆ ಒತ್ತಾಯಿಸಿದ್ದ ಖಾಸಗಿ ಆಸ್ಪತ್ರೆಯ ವಿರುದ್ಧ ಸುಹೈಲ್ ಹಾಗೂ ಇತರ ಕೆಲವು ನಾಯಕರು ಇತ್ತೀಚೆಗೆ ಪ್ರತಿಭಟನೆ ನಡೆಸಿ, ಮೃತದೇಹವನ್ನು ಸಂತ್ರಸ್ತ ಕುಟುಂಬಕ್ಕೆ ನೀಡುವಂತೆ ಒತ್ತಾಯಿಸಿದ್ದರು. ಪ್ರತಿಭಟನೆಗೆ ಮಣಿದ ಆಸ್ಪತ್ರೆಯವರು ಮೃತದೇಹವನ್ನು ಹಸ್ತಾಂತರಿಸಿದ್ದರು.


ಇಂದು ಖಾಸಗಿ ಆಸ್ಪತ್ರೆಯವರು ಮಂಗಳೂರು ನಗರ ಠಾಣೆಯಲ್ಲಿ ಸುಹೈಲ್ ಕಂದಕ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಸುಹೈಲ್ ಕಂದಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಂಧನ ಪ್ರಕರಣದಲ್ಲಿ ಬಿಜೆಪಿ ಮುಖಂಡರ ಕೈವಾಡ ಇದೆ, ಪೊಲೀಸರ ಮೇಲೆ ಬಿಜೆಪಿ ನಾಯಕರಿಂದ ಒತ್ತಡವಿದೆ ಎಂದು ಸುಹೈಲ್ ಕಂದಕ್ ಆರೋಪಿಸಿದ್ದಾರೆ.


ಬಿಜೆಪಿ ಪಿತೂರಿಗೆ ಬಗ್ಗುವ ಕಾರ್ಯಪಡೆ ನಮ್ನದಲ್ಲ. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಂಗಳೂರಿನ ನಗರ ಪೊಲೀಸ್ ಠಾಣೆಯಲ್ಲಿ ಮಾಧ್ಯಮಗಳಿಗೆ ಸುಹೈಲ್ ಕಂದಕ್ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆಯೇ ಪೊಲೀಸರು ಠಾಣೆಗೆ ಕರೆಯಿಸಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಆದರೂ ಇಂದು ಮತ್ತೆ ಬಂಧಿಸಿರುವುದು ಖಂಡನೀಯ ಎಂದು ಪಕ್ಷದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಠಾಣೆ ಮುಂದೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಜಮಾಯಿಸಿ ಪಕ್ಷದ ಮುಖಂಡನನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

Join Whatsapp
Exit mobile version