ಗುವಾಹಟಿ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರ ಅಕ್ರಮ ಬಂಧನ ಮತ್ತು ಬಿಜೆಪಿಯ ಸೇಡಿಯ ರಾಜಕಾರಣದ ವಿರುದ್ಧ ಯೂತ್ ಕಾಂಗ್ರೆಸ್ ವತಿಯಿಂದ ಅಸ್ಸಾಮ್’ನ ಬರ್ಪೇಟಾ ಎಂಬಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಸಭೆಯನ್ನುದ್ದೇಶಿಸಿ ಮಾತನಾಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಒಬ್ಬ ಚುನಾಯಿತ ಜನ ಪ್ರತಿನಿಧಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾದರೆ ಇನ್ನು ಜನ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಇದು ಬಿಜೆಪಿ ಸರ್ಕಾರದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಕ್ರಿಯೆಗೆ ಜ್ವಲಂತ ಉದಾಹರಣೆ ಎಂದು ಅವರು ಕಿಡಿಕಾರಿದ್ದಾರೆ.
ಮಾತ್ರವಲ್ಲ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಸರ್ಕಾರವನ್ನು ಶ್ರೀನಿವಾಸ್ ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ಹೊರ ಹಾಕಿದರು.
ಈ ಮಧ್ಯೆ ಶಾಸಕ ಜಿಗ್ನೇಶ್ ಮೇವಾನಿ ಬಂಧನವನ್ನು ವಿರೋಧಿಸಿ ಗುಜರಾತಿನಲ್ಲೂ ದಲಿತ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದಾರೆ.